Local NEWS

ಉತ್ತರ ಕನ್ನಡ| ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್

ಇಂದು ಬೆಳಗಿನ ಜಾವ ಸುಮಾರು 3 ಗಂಟೆಗೆ ಅಂಕೋಲಾ ತಾಲೂಕಿನ ಅಗಸೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಳ್ಳಕ್ಕೆ ಬಿದ್ದಿದೆ.  ಬೆಳಗಾವಿಯಿಂದ ಯಲ್ಲಾಪುರ-ಅಂಕೋಲಾ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ, ಕಿರು ಸೇತುವೆಗೆ ಡಿಕ್ಕಿ ಹೊಡೆದು ಪಕ್ಕದಲ್ಲೇ ಇದ್ದ ಹಳ್ಳಕ್ಕೆ ಬಿದ್ದಿದೆ. ಈ ದುರ್ಘಟನೆಯಲ್ಲಿ 18 ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಐವರು ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಮತ್ತು ಮಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಅಪಘಾತ ಸಂಭವಿಸುತ್ತಿದ್ದಂತೆ, ಚಾಲಕ ಸೈಯದ್ ಜಾಕಿರ್ ಇನಾಮ್‌ದಾರ, ಆಂಬ್ಯುಲೆನ್ಸ್ ವಾಹನಗಳು ಹಾಗೂ ಸ್ಥಳೀಯರು ಮತ್ತು ದಾರಿಹೋಕರು ತಕ್ಷಣವೇ ನೆರವಿಗೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ. ಚಾಲಕನ ನಿರ್ಲಕ್ಷ್ಯ ಮತ್ತು ಅತಿ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಅನೇಕ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಹಳ್ಳಕ್ಕೆ ಬಿದ್ದರೂ ಬಹುತೇಕ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *