Local NEWS

ಉತ್ತರ ಕನ್ನಡ| ಲಿಂಗನಮಕ್ಕಿ ಜಲಾಶಯದ ಅಂಚಿನಲ್ಲಿರುವ ಸಾರ್ವಜನಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರುಳುವಂತೆ ಮುನ್ಸೂಚನೆ ನೀಡಿದ ಅಧಿಕಾರಿಗಳು

ಶರಾವತಿ ಜಲವಿದ್ಯುತ್ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳ ಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೆದಿನೇ ಏರುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು. ಜು.15 ರಂದು ಬೆಳಗ್ಗೆ 8 ಗಂಟೆಗೆ ಜಲಾಶಯದ ನೀರಿನ ಮಟ್ಟ 1801.10 (65.12%) ಅಡಿಗಳಗೆ ತಲುಪಿರುತ್ತದೆ. ಈ ದಿನದ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 32.000 ಕ್ಯೂಸೆಕ್ಸ್ ಗಳಿಗಿಂತಲೂ ಅಧಿಕವಾಗಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ. ಅದರಂತೆ, ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು. ಆದ್ದರಿಂದ, ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಾವು ಮತ್ತು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಹಾಗೂ ಪ್ರವಾಸಿಗರು ನದಿಯ ನೀರಿಗೆ ಇಳಿಯಬಾರದೆಂದು ಕಾರ್ಯನಿರ್ವಾಹಕ ಅಭಿಯಂತರರು(ಕಾಮಗಾರಿ) ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *